Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:13 - ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನೀನು ಕೇಳದಂಥದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ ಘನದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಕೇಳದೆಹೋದ ಬಿನ್ನಹಗಳನ್ನು ನಾನು ನಿನಗೆ ಅನುಗ್ರಹಿಸುತ್ತೇನೆ. ನಿನ್ನ ಜೀವವಿರುವವರೆಗೆ ನೀನು ಶ್ರೀಮಂತನಾಗಿದ್ದು ಘನಮಾನವನ್ನು ಹೊಂದುವಿ. ಪ್ರಪಂಚದಲ್ಲಿ ನಿನ್ನಂತಹ ಉನ್ನತವಾದ ಬೇರೊಬ್ಬ ರಾಜನು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:13
14 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


ಈ ಪ್ರಕಾರ ಅರಸ ಸೊಲೊಮೋನನು ಐಶ್ವರ್ಯದಲ್ಲೂ ಜ್ಞಾನದಲ್ಲೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.


“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯದ ಅರಸರು ಹಾಗು ಪ್ರದೇಶಾಧಿಪತಿಗಳು ತರುತ್ತಿದ್ದ ಬಂಗಾರವಲ್ಲದೆ


ಅಂದದ ಪುಷ್ಪಮಾಲೆಯನ್ನು ಹಾಕುವಳು ನಿನ್ನ ಕೊರಳಿಗೆ, ಸುಂದರ ಕಿರೀಟವನ್ನು ಮುಡಿಸುವಳು ನಿನ್ನ ತಲೆಗೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು