Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:3 - ಕನ್ನಡ ಸತ್ಯವೇದವು C.L. Bible (BSI)

3 ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:3
51 ತಿಳಿವುಗಳ ಹೋಲಿಕೆ  

ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.


ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ಹಾಗೆಯೇ ಉಳಿದಿದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣಮನಸ್ಸಿನಿಂದ ಸರ್ವೇಶ್ವರನನ್ನು ಸೇವೆಮಾಡಿದಂತೆ ಅವನು ಸೇವೆಮಾಡಲಿಲ್ಲ.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ನಾನು ನಿಮ್ಮ ಒಳಿತಿಗಾಗಿ ಈಗ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಬರಬೇಕು. ಇಷ್ಟನ್ನೇ ಹೊರತು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮಿಂದ ಬೇರೇನನ್ನು ಕೇಳಿಕೊಳ್ಳುವುದಿಲ್ಲ.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II


ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಇವನು ಇಸ್ರಯೇಲರ ಅರಸನೊಡನೆ ಸಮಾಧಾನದಿಂದಿದ್ದನು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ.


ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು