Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:6 - ಕನ್ನಡ ಸತ್ಯವೇದವು C.L. Bible (BSI)

6 ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನಗೆ ನಂಬಿಗಸ್ತನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾಕೃಪೆಯನ್ನು ತೋರಿಸಿದಿ; ಅವನ ಮೇಲೆ ಬಹಳವಾಗಿ ಕೃಪೆಮಾಡಿ ಈಗಿರುವಂತೆ ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಪೂರ್ತಿಗೊಳಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:6
24 ತಿಳಿವುಗಳ ಹೋಲಿಕೆ  

ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?


ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕ ಹಾಗೆ.


ನಾ ನೀತಿವಂತ, ನಿರಪರಾಧಿಯೆಂದರಿತು ನನಗಿತ್ತನಾ ಸರ್ವೇಶ್ವರ ತಕ್ಕ ಪ್ರತಿಫಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು