Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:9 - ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:9
36 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


“ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.


ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.


ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು.


ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು