1 ಅರಸುಗಳು 4:27 - ಕನ್ನಡ ಸತ್ಯವೇದವು C.L. Bible (BSI)27 ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮೇಲೆ ಕಂಡ ಪ್ರದೇಶಾಧಿಪತಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕೂತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ಅಧಿಪತಿಗಳು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೋಸ್ಕರವೂ, ಅರಸನ ಮೇಜಿಗೆ ಬರುವವರೆಲ್ಲರಿಗೋಸ್ಕರವೂ ಸಿದ್ಧಮಾಡಿದ್ದರು. ಅವರಿಗೆ ಕೊರತೆಯಾದದ್ದು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿ |