Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಮೇಲೆ ಹನ್ನೆರಡು ಮಂದಿ ಪ್ರದೇಶಾಧಿಪತಿಗಳನ್ನು ನೇವಿುಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಅವನ ಮನೆಯವರಿಗೂ ಬೇಕಾದ ಆಹಾರಪದಾರ್ಥಗಳನ್ನು ಪ್ರತಿವರುಷವೂ ಒದಗಿಸಿ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:7
6 ತಿಳಿವುಗಳ ಹೋಲಿಕೆ  

ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ.


ಅವರ ಹೆಸರುಗಳು ಹಾಗು ಜಿಲ್ಲೆಗಳ ಹೆಸರುಗಳು ಇವು:


“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಭಾರವನ್ನು ಹಗುರಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ,” ಎಂದನು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು