Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ತಾನು ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಈ ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:12
12 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.


ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.


ಬೇರ್ಷೆಬದಲ್ಲಿ ಅವರು ಒಪ್ಪಂದಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಪತಿ ಫೀಕೋಲನು ಫಿಲಿಷ್ಟಿಯಕ್ಕೆ ಹಿಂದಿರುಗಿದರು.


ಅರಸ ಸೊಲೊಮೋನನು, ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿಯನ್ನು ಬಿಟ್ಟಿಕೆಲಸಕ್ಕೆಂದು ಹಿಡಿದು,


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಇಸ್ರಯೇಲರಿಗೆ ಅರಸನಾಗಿದ್ದ ದಾವೀದನ ಮಗ ಸೊಲೊಮೋನನ ಜ್ಞಾನೋಕ್ತಿಗಳು:


ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.


ಸೊಲೊಮೋನನ ಪರಮಗೀತೆ : ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು