Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:5
15 ತಿಳಿವುಗಳ ಹೋಲಿಕೆ  

ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.


ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು.


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು.


“ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ನಾಡಿನಲ್ಲಿ ನಿರ್ಭಯವಾಗಿ ಬಾಳುವಿರಿ.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು