Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:6 - ಕನ್ನಡ ಸತ್ಯವೇದವು C.L. Bible (BSI)

6 ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರ ಕೊಯ್ಯುವದರಲ್ಲಿ ಜಾಣರು ನಮ್ಮಲ್ಲಿರುವದಿಲ್ಲವೆಂದು ನಿನಗೆ ಗೊತ್ತುಂಟಲ್ಲಾ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:6
20 ತಿಳಿವುಗಳ ಹೋಲಿಕೆ  

ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಆತನ ಗರ್ಜನೆಗೆ ಮುರಿದುಬೀಳುವುವು ದೇವದಾರು ಮರಗಳು I ಹೌದ್ಹೌದು, ಸೀಳಿ ಹೋಳಾಗುವುವು ಲೆಬನೋನಿನ ಮಹಾ ವೃಕ್ಷಗಳು II


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಮರ ಕಡಿಯುವ ನಿನ್ನ ಆಳುಗಳಿಗಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿ, ಎರಡು ಸಾವಿರ ಮೆಟ್ರಿಕ್ ಟನ್ ಜವೆಗೋದಿ, ನಾಲ್ಕು ಲಕ್ಷ ಲೀಟರ್ ದ್ರಾಕ್ಷಾರಸ ಹಾಗೂ ನಾಲ್ಕು ಲಕ್ಷ ಲೀಟರ್ ಎಣ್ಣೆ ಇವುಗಳನ್ನು ಕೊಡುವೆನು,” ಎಂದು ಹೇಳಿಸಿದನು.


ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.


ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.


ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.


ಎಣಿಸಲಾಗದಷ್ಟು ದೇವದಾರು ಮರಗಳನ್ನೂ ಸಿದ್ಧಪಡಿಸಿದನು; ಸಿದೋನ್ ಹಾಗು ಟೈರಿನ ಜನರು ಅವನಿಗೆ ದೇವದಾರು ಮರಗಳನ್ನು ಒದಗಿಸಿದರು.


ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.


ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.


ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು