1 ಅರಸುಗಳು 5:7 - ಕನ್ನಡ ಸತ್ಯವೇದವು C.L. Bible (BSI)7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು. ಅಧ್ಯಾಯವನ್ನು ನೋಡಿ |