Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ‘ಗರ್ಭಗುಡಿ’ ಎಂದು ಪ್ರತ್ಯೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವದಕ್ಕೋಸ್ಕರ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಈ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವುದಕ್ಕೆ ಆಲಯದ ಒಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:19
10 ತಿಳಿವುಗಳ ಹೋಲಿಕೆ  

ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,


ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ದೇವಾಲಯದ ಗೋಡೆಯ ಸುತ್ತಲೂ ಅಂದರೆ, ಪರಿಶುದ್ಧಸ್ಥಳ ಹಾಗು ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.


ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.


ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು