Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:3 - ಕನ್ನಡ ಸತ್ಯವೇದವು C.L. Bible (BSI)

3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:3
11 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ,


ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ಐವತ್ತು ಮೀಟರಿತ್ತು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.


ಇದಲ್ಲದೆ, ಅವನು ಆಲಯಕ್ಕೆ ತೆರೆಯಲಾಗದ ಜಾಲಂಧರ ಕಿಟಕಿಗಳನ್ನಿಡಿಸಿದನು.


ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.


ಕೂಡಲೆ ಆ ಪುರುಷ ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆದುತಂದು ಅದನ್ನು ಅಳೆದನು. ಅದರ ಎದುರುಬದುರಿನ ನಿಲವುಕಂಬಗಳ ಅಗಲ ಎರಡುವರೆ ಮೀಟರುಗಳು, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಅರ್ಧರ್ಧ ಮೀಟರ್,


ಒಳಗಣ ಪ್ರಾಕಾರವೆನಿಸಿಕೊಳ್ಳುವ ಸರ್ವೇಶ್ವರನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು