Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:32 - ಕನ್ನಡ ಸತ್ಯವೇದವು C.L. Bible (BSI)

32 ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಚೌಕಟ್ಟು ಪಂಚಕೋಣಗಳುಳ್ಳದಾಗಿತ್ತು. ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:32
8 ತಿಳಿವುಗಳ ಹೋಲಿಕೆ  

ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.


ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.


ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.


ಇದಲ್ಲದೆ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿ,


ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.


ಆ ಚೌಕಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ;


ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು