Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:36 - ಕನ್ನಡ ಸತ್ಯವೇದವು C.L. Bible (BSI)

36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:36
10 ತಿಳಿವುಗಳ ಹೋಲಿಕೆ  

ಒಳಗಣ ಪ್ರಾಕಾರವೆನಿಸಿಕೊಳ್ಳುವ ಸರ್ವೇಶ್ವರನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಸೊಲೊಮೋನನು ಮಾಡಿಸಿದ್ದ ಕಂಚಿನ ಬಲಿಪೀಠವು, ಸಮರ್ಪಣೆಯಾದ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಶಾಂತಿಸಮಾಧಾನಬಲಿಯ ಕೊಬ್ಬನ್ನೂ ಹಿಡಿಯಲಾಗಲಿಲ್ಲ. ಆದ್ದರಿಂದ ಅವನು ಸರ್ವೇಶ್ವರನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.


ಮತ್ತೆ, ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಾಡಿಸಿ ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಇಟ್ಟನು. ಅವುಗಳ ಕದಗಳನ್ನು ಕಂಚಿನ ತಗಡಿನಿಂದ ಹೊದಿಸಿದನು.


ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.


ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.


ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.


ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರೆದುತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ ಅಲ್ಲಿನ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು