Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:38 - ಕನ್ನಡ ಸತ್ಯವೇದವು C.L. Bible (BSI)

38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹನ್ನೊಂದನೆಯ ವರುಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವದಕ್ಕೆ ಏಳು ವರುಷ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹನ್ನೊಂದನೆಯ ವರ್ಷದ, ಎಂಟನೆಯ ತಿಂಗಳಾದ ಬೂಲ್ ಎಂಬ ಕಾರ್ತಿಕ ತಿಂಗಳಲ್ಲಿ ಆ ದೇವಾಲಯದ ಎಲ್ಲಾ ಭಾಗಗಳೂ ಯೋಜನೆಯ ಪ್ರಕಾರ ಕಟ್ಟಲಾಯಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:38
19 ತಿಳಿವುಗಳ ಹೋಲಿಕೆ  

ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”


ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.


ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ಹೀಗೆ ಸೊಲೊಮೋನನು ದೇವಾಲಯವನ್ನು ಕಟ್ಟಿಮುಗಿಸಿದನು.


ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತು.


ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.


ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.


ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು