Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:5 - ಕನ್ನಡ ಸತ್ಯವೇದವು C.L. Bible (BSI)

5 ದೇವಾಲಯದ ಗೋಡೆಯ ಸುತ್ತಲೂ ಅಂದರೆ, ಪರಿಶುದ್ಧಸ್ಥಳ ಹಾಗು ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧಸ್ಥಳ, ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಟ್ಟಡದ ಹೊರಗಿನ ಗೋಡೆಗಳ ಸುತ್ತಲೂ, ಸೊಲೊಮೋನನು ಅನೇಕ ಕೋಣೆಗಳ ಸಂಕೀರ್ಣವನ್ನು ಎರಡೂ ಬದಿಗಳಲ್ಲಿ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:5
26 ತಿಳಿವುಗಳ ಹೋಲಿಕೆ  

ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,


ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.


ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.


ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


ಬಳಿಕ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಕೆಳಗಿನ ಕೊಠಡಿಗಳ ಅಗಲ 2:2 ಮೀಟರ್; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲ 2:7 ಮೀಟರ್; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲ 3:1 ಮೀಟರ್. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದು ಎಂದು ಗೋಡೆಯ ಹೊರ ಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು.


ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು