Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:25 - ಕನ್ನಡ ಸತ್ಯವೇದವು C.L. Bible (BSI)

25 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖಮಾಡಿಕೊಂಡಿದ್ದವು. ಕಡಲು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗ ಒಳಗಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರದಿಕ್ಕಿಗೂ ಮೂರು ಪಶ್ಚಿಮದಿಕ್ಕಿಗೂ ಮೂರು ದಕ್ಷಿಣದಿಕ್ಕಿಗೂ ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು; ಅವುಗಳ ಹಿಂಭಾಗವು ಒಳಗಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈ ತೊಟ್ಟಿಯು ಹನ್ನೆರಡು ಹಿತ್ತಾಳೆಯ ಹೋರಿಗಳ ಬೆನ್ನಿನ ಮೇಲಿತ್ತು. ಈ ಹನ್ನೆರಡು ಹೋರಿಗಳೂ ತೊಟ್ಟಿಗೆ ದೂರವಾಗಿದ್ದ ಹೊರಭಾಗವನ್ನು ನೋಡುತ್ತಿರುವಂತೆ ಕಾಣುತ್ತಿದ್ದವು. ಮೂರು ಉತ್ತರದ ಕಡೆಗೂ ಮೂರು ಪೂರ್ವದ ಕಡೆಗೂ ಮೂರು ದಕ್ಷಿಣದ ಕಡೆಗೂ ಮೂರು ಪಶ್ಚಿಮದ ಕಡೆಗೂ ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:25
11 ತಿಳಿವುಗಳ ಹೋಲಿಕೆ  

ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.


“ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ,” ಎಂದು ಮೋಶೆಯ ಧರ್ಮಶಾಸ್ತ್ರದಲ್ಲೇ ಲಿಖಿತವಾಗಿದೆ. ಇಲ್ಲಿ ದೇವರಿಗೆ ಎತ್ತಿನ ಮೇಲೆ ಚಿಂತೆಯೇ? ಇಲ್ಲ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.


ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.


ಕಂಚಿನ ಕಡಲು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು;


ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು