Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:36 - ಕನ್ನಡ ಸತ್ಯವೇದವು C.L. Bible (BSI)

36 ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರ ಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:36
11 ತಿಳಿವುಗಳ ಹೋಲಿಕೆ  

ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ, ಕೆರೂಬಿ, ಇವುಗಳ ಚಿತ್ರಗಳಿದ್ದವು; ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು; ಸಿಂಹ, ಹೋರಿ, ಇವುಗಳ ಮೇಲೂ ಕೆಳಗೂ ತೋರಣಚಿತ್ರಗಳಿದ್ದವು.


ಆದರೆ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು. ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.


ಆ ಹೆಬ್ಬಾಗಿಲ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಅದರ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.


ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.


ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.


ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ಪೀಠದ ಮೇಲಿನ ಭಾಗದಲ್ಲಿದ್ದ ಚಕ್ರಾಕಾರ ಆದ ಬಾಯಿಯು ಅರ್ಧಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು;


ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ.


ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು