Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:46 - ಕನ್ನಡ ಸತ್ಯವೇದವು C.L. Bible (BSI)

46 ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46-47 ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:46
5 ತಿಳಿವುಗಳ ಹೋಲಿಕೆ  

ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


ಅರಸನು ಜೋರ್ಡನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯಲ್ಲಿ ಎರಕ ಹೊಯ್ಸಿದನು.


ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.


ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು