Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:1
25 ತಿಳಿವುಗಳ ಹೋಲಿಕೆ  

ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು


ಸಂಕೀರ್ತಿಸಿರಿ ಸಿಯೋನಿನಲಿ ವಾಸಿಸುವ ಪ್ರಭುವನು I ಪ್ರಕಟಿಸಿರಿ ಜನತೆಗೆ ಆತನ ಮಹತ್ಕಾರ್ಯಗಳನು II


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು.


ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ ನಗರ’ ಎಂದು ಹೆಸರಾಯಿತು.


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ತಡವರಿಸಿದವು. ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.


ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು