Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:11
22 ತಿಳಿವುಗಳ ಹೋಲಿಕೆ  

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ಮೋಶೆ ಅವರಿಗೆ, “ನೀವು ಇವುಗಳನ್ನೆಲ್ಲ ಮಾಡಬೇಕೆಂದು ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ್ದಾರೆ; ಅದರಂತೆ ನೀವು ನಡೆದುಕೊಂಡರೆ ಸರ್ವೇಶ್ವರನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು,” ಎಂದು ಹೇಳಿದನು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.


ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು.


ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”


ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ಅಲ್ಲಿಯೇ ನಾನು ಇಸ್ರಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವುದು.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು