Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:12 - ಕನ್ನಡ ಸತ್ಯವೇದವು C.L. Bible (BSI)

12-13 ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:12
12 ತಿಳಿವುಗಳ ಹೋಲಿಕೆ  

ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;


“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.


ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು.


ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.


ಜನಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು