1 ಅರಸುಗಳು 8:14 - ಕನ್ನಡ ಸತ್ಯವೇದವು C.L. Bible (BSI)14 ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.