Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:15 - ಕನ್ನಡ ಸತ್ಯವೇದವು C.L. Bible (BSI)

15 “ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:15
29 ತಿಳಿವುಗಳ ಹೋಲಿಕೆ  

ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II


ನಾವಾದರೋ ಪ್ರಭುವನು ಹೊಗಳಿ ಹಾಡುವೆವು I ಇಂದಿಗೂ ಎಂದೆಂದಿಗೂ ಹೊಗಳಿ ಹಾಡುವೆವು II ಅಲ್ಲೆಲೂಯ.


“ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನನ್ನ ತಂದೆ ದಾವೀದನಿಗೆ ಅವರು ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.


ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


“ದೇವರೇ, ಸರ್ವೆಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.


“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?


ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು