Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್‍ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:20
15 ತಿಳಿವುಗಳ ಹೋಲಿಕೆ  

ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಸಾಕ್ಷಾತ್ ಆ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು