Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:22 - ಕನ್ನಡ ಸತ್ಯವೇದವು C.L. Bible (BSI)

22 ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:22
13 ತಿಳಿವುಗಳ ಹೋಲಿಕೆ  

ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:


ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.


ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಆ ಮೇಘಸ್ತಂಭ ಗುಡಾರದ ಬಾಗಿಲಲ್ಲಿ ನಿಲ್ಲುವುದನ್ನು ಜನರೆಲ್ಲರು ನೋಡಿ, ಎದ್ದುನಿಂತು ತಮ್ಮತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು