Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:23 - ಕನ್ನಡ ಸತ್ಯವೇದವು C.L. Bible (BSI)

23 “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:23
27 ತಿಳಿವುಗಳ ಹೋಲಿಕೆ  

ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು