Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:26 - ಕನ್ನಡ ಸತ್ಯವೇದವು C.L. Bible (BSI)

26 ಇಸ್ರಯೇಲ್ ದೇವರೇ, ನೀವು ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್‍ದೇವರೇ, ನೀನು ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲಿನ ದೇವರಾದ ಯೆಹೋವನೇ, ನನ್ನ ತಂದೆಗೆ ನೀಡಿದ ಆ ವಾಗ್ದಾನವನ್ನು ನೆರವೇರಿಸೆಂದು ನಾನು ನಿನ್ನಲ್ಲಿ ಮತ್ತೆ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈಗ ಇಸ್ರಾಯೇಲಿನ ದೇವರೇ, ನೀವು ನನ್ನ ತಂದೆಯೂ ನಿಮ್ಮ ಸೇವಕನೂ ಆದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:26
14 ತಿಳಿವುಗಳ ಹೋಲಿಕೆ  

ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.


ಭಯಭಕ್ತ ಜನತೆಗೆ ನೀನಿತ್ತಾ ಮಾತು I ದಾಸನಾದ ನನ್ನಲಿ ನೆರವೇರಲಿ ಇಂತು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು