Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:28 - ಕನ್ನಡ ಸತ್ಯವೇದವು C.L. Bible (BSI)

28 ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ಈಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ದಯವಿಟ್ಟು ನನ್ನ ಪ್ರಾರ್ಥನೆಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಈ ಪ್ರಾರ್ಥನೆಯನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ಇಂದು ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:28
15 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II


ಹೀಗೆಂದು ಪ್ರಾರ್ಥನೆ ಮಾಡಿದನು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು