Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:33 - ಕನ್ನಡ ಸತ್ಯವೇದವು C.L. Bible (BSI)

33 “ತಮ್ಮ ಪಾಪಗಳ ಸಲುವಾಗಿ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ತಮ್ಮ ಪಾಪಗಳ ಸಲುವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಎತ್ತಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:33
23 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಶತ್ರುಗಳಿಗೆ ಬೆಂಗೊಟ್ಟು ನಾವೋಡುವಂತೆ ಮಾಡಿರುವೆ I ಹಗೆಗಳು ಹಾಯಾಗಿ ಸೊತ್ತನು ಸೂರೆಮಾಡ ಬಿಟ್ಟಿರುವೆ II


ಸರ್ವೇಶ್ವರಾ, ಇಸ್ರಯೇಲರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ! ನಾನು ಏನು ತಾನೇ ಹೇಳಲಿ!


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,


ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು