Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:35 - ಕನ್ನಡ ಸತ್ಯವೇದವು C.L. Bible (BSI)

35 “ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:35
30 ತಿಳಿವುಗಳ ಹೋಲಿಕೆ  

“ತಮ್ಮ ಪಾಪಗಳ ಸಲುವಾಗಿ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.


ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


“ಅವರ ಪಾಪಗಳ ನಿಮಿತ್ತ ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ, ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ, ಈ ಆಲಯದ ಕಡೆಗೆ ತಿರುಗಿಕೊಂಡು, ನಿಮ್ಮನ್ನು ಪ್ರಾರ್ಥಿಸಿದರೆ,


“ತಮ್ಮ ಪಾಪಗಳ ನಿಮಿತ್ತ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.


ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.


ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು