Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:36 - ಕನ್ನಡ ಸತ್ಯವೇದವು C.L. Bible (BSI)

36 ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:36
28 ತಿಳಿವುಗಳ ಹೋಲಿಕೆ  

ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ I ಅದರಂತೆಯೇ ನಡೆಯುವೆನು ಕಡೆಯವರೆಗೆ II


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ದೇವಾ, ಹೇರಳವಾಗಿ ನೀ ಸುರಿಮಳೆಗರೆದೆ I ಬತ್ತಿದ ನಿನ್ನ ಸೊತ್ತನ್ನು ಸಮೃದ್ಧಿಗೊಳಿಸಿದೆ II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಸತ್ಯಸ್ವರೂಪನು, ದಯಾವಂತನು ಪ್ರಭು I ದಾರಿತಪ್ಪಿದವರಿಗೆ ಬೋಧಕನು ವಿಭು II


ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು