Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:37 - ಕನ್ನಡ ಸತ್ಯವೇದವು C.L. Bible (BSI)

37 “ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:37
20 ತಿಳಿವುಗಳ ಹೋಲಿಕೆ  

ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ತಮ್ಮ ಮೇಲೆ ಖಡ್ಗವಿಧಿ, ಘೋರವ್ಯಾಧಿ, ಕ್ಷಾಮಡಾಮರ, ಮೊದಲಾದ ಆಪತ್ತುಗಳು ಬರುವಾಗ, ನಿಮ್ಮ ನಾಮಮಹಿಮೆ ಇರುವ ಈ ಆಲಯದ ಮುಂದೆಯೂ ನಿಮ್ಮ ಮುಂದೆಯೂ ನಿಂತು, ತಮ್ಮ ಇಕ್ಕಟ್ಟಿನಲ್ಲಿ ನಿಮಗೆ ಮೊರೆ ಇಡುವುದಾದರೆ ನೀವು ಆಲಿಸಿ ರಕ್ಷಿಸುವಿರಿ ಎಂದುಕೊಂಡರಷ್ಟೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.


‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಬಿಟ್ಟನು ಬೆಳೆಗಳನು ಚಿಟ್ಟೆಗಳಿಗೆ I ಕಷ್ಟದ ಫಲಗಳನು ಮಿಡತೆಗಳಿಗೆ II


ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II


ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು