Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:39 - ಕನ್ನಡ ಸತ್ಯವೇದವು C.L. Bible (BSI)

39 ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:39
24 ತಿಳಿವುಗಳ ಹೋಲಿಕೆ  

“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.


ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು