Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:40 - ಕನ್ನಡ ಸತ್ಯವೇದವು C.L. Bible (BSI)

40 ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನೀನು ಹೀಗೆ ಮಾಡಿದರೆ, ನೀನು ನಮ್ಮ ಪೂರ್ವಿಕರಿಗೆ ದಯಪಾಲಿಸಿರುವ ಈ ದೇಶದಲ್ಲಿ ಅವರು ವಾಸಿಸುವ ಎಲ್ಲಾ ಕಾಲದಲ್ಲೂ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:40
18 ತಿಳಿವುಗಳ ಹೋಲಿಕೆ  

ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


“ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


“ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.


ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು