Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:44 - ಕನ್ನಡ ಸತ್ಯವೇದವು C.L. Bible (BSI)

44 “ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವದಕ್ಕೋಸ್ಕರ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ಈ ದೇವಾಲಯದ ಕಡೆಗೆ ಮುಖ ಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:44
26 ತಿಳಿವುಗಳ ಹೋಲಿಕೆ  

ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಆ ಆಲಯದ ಕಡೆಗೂ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ,


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.


ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದುಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು