1 ಅರಸುಗಳು 8:48 - ಕನ್ನಡ ಸತ್ಯವೇದವು C.L. Bible (BSI)48 ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ, ಅಧ್ಯಾಯವನ್ನು ನೋಡಿ |