Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:51 - ಕನ್ನಡ ಸತ್ಯವೇದವು C.L. Bible (BSI)

51 ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನಿನ್ನ ಸ್ವಕೀಯ ಜನರಾಗಿದ್ದಾರೆಂಬದನ್ನು ನೆನಸಿ ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷವಿುಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆ ಹುಟ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:51
15 ತಿಳಿವುಗಳ ಹೋಲಿಕೆ  

ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿ, ಅವರಿಗೆ ದಯೆ ತೋರಿಸಿ, ನಿಮಗೆ ವಿರುದ್ಧ ಪಾಪಮಾಡಿದ ನಿಮ್ಮ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸಿರಿ.


ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II


ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;


ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು