Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:53 - ಕನ್ನಡ ಸತ್ಯವೇದವು C.L. Bible (BSI)

53 ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಭೂಲೋಕದ ಎಲ್ಲಾ ಜನರೊಳಗಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:53
16 ತಿಳಿವುಗಳ ಹೋಲಿಕೆ  

ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು