Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:56 - ಕನ್ನಡ ಸತ್ಯವೇದವು C.L. Bible (BSI)

56 “ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 “ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 “ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 “ತಮ್ಮ ಜನರಾದ ಇಸ್ರಾಯೇಲರಿಗೆ ತಾವು ಮಾತುಕೊಟ್ಟ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ವಾಗ್ದಾನಗಳಲ್ಲಿ ಒಂದು ವಾಗ್ದಾನವಾದರೂ ಬಿದ್ದು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:56
15 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.


ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


“ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು