Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:58 - ಕನ್ನಡ ಸತ್ಯವೇದವು C.L. Bible (BSI)

58 ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:58
12 ತಿಳಿವುಗಳ ಹೋಲಿಕೆ  

ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.


ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು