1 ಅರಸುಗಳು 8:59 - ಕನ್ನಡ ಸತ್ಯವೇದವು C.L. Bible (BSI)59 ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ನನ್ನ ಈ ಪ್ರಾರ್ಥನೆಯನ್ನು ಮತ್ತು ನಾನು ಕೇಳಿಕೊಂಡವುಗಳನ್ನು ನಮ್ಮ ದೇವರಾದ ಯೆಹೋವನು ಸದಾ ಜ್ಞಾಪಿಸಿಕೊಳ್ಳಲಿ. ಯೆಹೋವನು ತನ್ನ ಸೇವಕನಾದ ರಾಜನಿಗೋಸ್ಕರವಾಗಿಯೂ ತನ್ನ ಜನರಾದ ಇಸ್ರೇಲರಿಗೋಸ್ಕರವಾಗಿಯೂ ಇವುಗಳನ್ನು ಈ ಹೊತ್ತೇ ನೆರವೇರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59-60 ಇದಲ್ಲದೆ ಯೆಹೋವ ದೇವರು ತಾವೇ ದೇವರಾಗಿದ್ದಾರೆ. ಅವರ ಹೊರತು ಬೇರೊಬ್ಬರಿಲ್ಲವೆಂದು ಭೂಲೋಕದ ಜನರೆಲ್ಲರೂ ತಿಳಿಯುವ ಹಾಗೆ, ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತಮ್ಮ ಸೇವಕನ ನ್ಯಾಯವನ್ನೂ, ತಮ್ಮ ಜನರಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ, ನಾನು ಯೆಹೋವ ದೇವರ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು, ರಾತ್ರಿ ಹಗಲು ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಇರಲಿ. ಅಧ್ಯಾಯವನ್ನು ನೋಡಿ |