1 ಅರಸುಗಳು 8:9 - ಕನ್ನಡ ಸತ್ಯವೇದವು C.L. Bible (BSI)9 ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |