Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:12 - ಕನ್ನಡ ಸತ್ಯವೇದವು C.L. Bible (BSI)

12 ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನ ಮನಸ್ಸಿಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:12
4 ತಿಳಿವುಗಳ ಹೋಲಿಕೆ  

ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಇದೆಂಥ ಪಟ್ಟಣಗಳನ್ನು ಕೊಟ್ಟಿರುವೆ!” ಎಂದು ಹೇಳಿ ಅವುಗಳಿಗೆ ‘ಕಾಬೂಲ್ ದೇಶ’ ಎಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು