Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೊಲೊಮೋನನ ಬಿಟ್ಟೀಕೆಲಸದವರು ಕಟ್ಟಿದವುಗಳು ಯಾವವಂದರೆ - ಯೆಹೋವನ ಆಲಯ, ಅರಮನೆ, ವಿುಲ್ಲೋಕೋಟೆ, ಯೆರೂಸಲೇವಿುನ ಪೌಳಿಗೋಡೆ, ಹಾಚೋರ್, ಮೆಗಿದ್ದೋ, ಗೆಜೆರ್ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:15
34 ತಿಳಿವುಗಳ ಹೋಲಿಕೆ  

ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು.


ಅರಸ ಸೊಲೊಮೋನನು, ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿಯನ್ನು ಬಿಟ್ಟಿಕೆಲಸಕ್ಕೆಂದು ಹಿಡಿದು,


ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ರಕ್ಕತ್, ಕಿನ್ನೆರೆತ್, ಅದಾಮಾ, ರಾಮಾ, ಹಾಚೋರ್,


ಹಾಚೋರಿನ ಅರಸ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮದೋನಿನ ಅರಸನಿಗೂ ಶಿಮ್ರೋನಿನ ಅರಸನಿಗೂ ಹಾಗು ಅಕ್ಷಾಫಿನ ಅರಸನಿಗೂ ಕರೆಕಳಿಸಿದನು.


ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.


ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.


ಎಫ್ರಯಿಮ್ ಬೆಟ್ಟದಲ್ಲಿಯ ಆಶ್ರಯ ನಗರವಾದ ಶೆಕೆಮ್,


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”


ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಎಫ್ರಯಿಮ್ ಸೊತ್ತಿನಿಂದ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯ ನಗರ,


ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.


ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.


“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಭಾರವನ್ನು ಹಗುರಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ,” ಎಂದನು.


ಅಲ್ಲಿಂದ ಇಳಿದು ದಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು