Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:24 - ಕನ್ನಡ ಸತ್ಯವೇದವು C.L. Bible (BSI)

24 ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:24
8 ತಿಳಿವುಗಳ ಹೋಲಿಕೆ  

ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ


ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನಗಾಗಿ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗಾಗಿ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.


ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.


“ಯಾವ ಯಾವ ಸ್ಥಳಗಳಲ್ಲಿ ಸರ್ವೇಶ್ವರನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳು; ಆದುದರಿಂದ ಇಸ್ರಯೇಲರ ಅರಸನಾಗಿದ್ದ ದಾವೀದನ ಮನೆ ಪವಿತ್ರವಾದುದು; ಅಲ್ಲಿ ಫರೋಹನ ಮಗಳಾದ ನನ್ನ ಹೆಂಡತಿ ವಾಸಿಸಬಾರದು,” ಎಂದುಕೊಂಡು ಸೊಲೊಮೋನನು ಆಕೆಯನ್ನು ದಾವೀದನಗರದಿಂದಾಚೆ ಆಕೆಗಾಗಿಯೇ ತಾನು ಕಟ್ಟಿಸಿದ್ದ ಮಂದಿರದಲ್ಲಿ ಇರಿಸಿದನು.


ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು