Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:27 - ಕನ್ನಡ ಸತ್ಯವೇದವು C.L. Bible (BSI)

27 ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ಥ ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸಮಾಡಲು, ರಾಜನಾದ ಹೀರಾಮನು ತನ್ನ ನಿಪುಣರಾದ ಜನರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:27
7 ತಿಳಿವುಗಳ ಹೋಲಿಕೆ  

ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.


ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.


ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.


ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


ನಿನಗೆ ಹುಟ್ಟುಹಾಕುವರು ಸಿದೋನಿನವರು, ಅರ್ವಾದಿನವರು. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು