Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:6 - ಕನ್ನಡ ಸತ್ಯವೇದವು C.L. Bible (BSI)

6 ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನೀವಾಗಲಿ ನಿಮ್ಮ ಮಕ್ಕಳಾಗಲಿ ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ ಅವುಗಳಿಗೆ ಕೈ ಮುಗಿಯುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6-7 “ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:6
15 ತಿಳಿವುಗಳ ಹೋಲಿಕೆ  

“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II


ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.


“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಮೀರಿ ನಡೆದರಾದರೆ ನನ್ನ ಶಾಸನಗಳನು I ಪರಿಪಾಲಿಸದೆ ಹೋದರೆ ಎನ್ನ ನಿಯಮಗಳನು II


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು