Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಭಾವಾನು ಅನಿ ಭೆನಿಯಾನು ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ; ತುಮಿ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ತುಮ್ಚ್ಯಾ ಮದ್ದಿ ಭಾಗ್ ರ್‍ಹಾವ್ಚೆ ನ್ಹಯ್, ತುಮಿ ಸಗ್ಳೆ ಜಾನಾ ಎಕುಚ್ ಮನಾಚೆ ಅನಿ ಎಕುಚ್ ಚಿಂತಾಪಾಚೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:10
44 ತಿಳಿವುಗಳ ಹೋಲಿಕೆ  

ದೇಹದಲ್ಲಿ ಭಿನ್ನಭೇದವಿಲ್ಲದೆ ಅಂಗಗಳು ಒಂದಕ್ಕೊಂದರ ಹಿತವನ್ನು ಗಮನಿಸುವಂತೆ ಮಾಡಿದ್ದಾರೆ.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲಿ ಮತ್ತೆ ವಾದವೆದ್ದಿತು.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ಹೀಗೆ ಯೇಸುವನ್ನು ಕುರಿತು ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು.


“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು