Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:14 - ಕನ್ನಡ ಸತ್ಯವೇದವು C.L. Bible (BSI)

14 ಸದ್ಯ! ಕ್ರಿಸ್ಪನು ಮತ್ತು ಗಾಯನು ಇವರಿಬ್ಬರನ್ನು ಬಿಟ್ಟರೆ ನಿಮ್ಮ ಪೈಕಿ ಯಾರಿಗೂ ನಾನು ದೀಕ್ಷಾಸ್ನಾನವನ್ನು ಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14-15 ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನಮಾಡಿಸಲಿಲ್ಲವಾದದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೆಂದು ಯಾರೂ ಹೇಳಲಾಗದು. ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮಲ್ಲಿ ಕ್ರಿಸ್ಪನು ಮತ್ತು ಗಾಯನು ಇವರ ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಮಾಡಿಸಿಲ್ಲವಾದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಚ್ಯಾತ್ಲ್ಯಾ ಕ್ರಿಸ್ಪಸಾಕ್ ಅನಿ ಗಾಯುಸಾಕ್ ಸೊಡುನ್ ಅನಿ ಕೊನಾಕ್‍ಬಿ ಮಿಯಾ ಬಾಲ್ತಿಮ್ ದಿವ್ಕ್ ನಾ, ಹೆಚ್ಯಾಸಾಟ್ನಿ ಮಿಯಾ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:14
14 ತಿಳಿವುಗಳ ಹೋಲಿಕೆ  

ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ನಾನಾದರೋ ದೇವರ ದಯೆಯಿಂದ ನಿಮಗಿಂತಲೂ ಮಿಗಿಲಾಗಿ ಪರವಶಾಭಾಷೆಗಳನ್ನು ಆಡಬಲ್ಲೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಪ್ರಿಯ ಫಿಲೆಮೋನನೇ, ನಾನು ನಿನಗಾಗಿ ಪ್ರಾರ್ಥಿಸುವಾಗಲೆಲ್ಲಾ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು.


ಆದ್ದರಿಂದ ನಿಮ್ಮಲ್ಲಿ ಯಾರೂ ದೀಕ್ಷಾಸ್ನಾನವನ್ನು ನನ್ನ ಹೆಸರಿನಲ್ಲಿ ಪಡೆದಿರಿ ಎಂದು ಹೇಳಿಕೊಳ್ಳುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು